ಕನ್ನಡ ಪುಸ್ತಕ ಹಬ್ಬವು ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವದಿಂದ ಆರಂಭವಾಗಿ, ಡಿಸೆಂಬರ್ 7ರವರೆಗೆ 37 ದಿನಗಳ ಕಾಲ ರಾಷ್ಟ್ರೋತ್ಥಾನದ ಕೇಶವಶಿಲ್ಪ ಸಭಾಂಗಣ, ಕೆಂಪೇಗೌಡನಗರ, ಬೆಂಗಳೂರು, ಇಲ್ಲಿ ನಡೆಯಲಿದೆ.

37 ದಿನಗಳ ಸಾಹಿತ್ಯ-ಸಂಸ್ಕೃತಿ ಉತ್ಸವದಲ್ಲಿ, ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಇರಲಿದ್ದು, ಪುಸ್ತಕ ಪ್ರೇಮಿಗಳು ಶೇ. 10 ರಿಂದ ಶೇ. 50ರ ವರೆಗೂ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಕೊಳ್ಳಬಹುದಾಗಿದೆ. ಈ ಪುಸ್ತಕ ಹಬ್ಬದಲ್ಲಿ ಹೊಸ ಪುಸ್ತಕಗಳ ಲೋಕಾರ್ಪಣೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು, ಸಾಹಿತ್ಯ-ಸಂಸ್ಕೃತಿ ಸಂಬಂಧಿತ ಚರ್ಚೆ, ಸಂವಾದ, ಉಪನ್ಯಾಸಗಳನ್ನೂ ಆಯೋಜಿಸಲಾಗುತ್ತಿದೆ. ಸಂಗೀತ – ನೃತ್ಯ – ತಾಳಮದ್ದಳೆ – ಹರಿಕಥೆ – ಯಕ್ಷಗಾನ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಸಂಜೆಗಳು ಜನರ ಮನಸೂರೆಗೊಳ್ಳಲಿವೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 94801 95130, 94806 45130, 95352 13721

Scroll to Top