ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸುತ್ತಿರುವ 6ನೇ ಕನ್ನಡ ಪುಸ್ತಕ ಹಬ್ಬ – 2026ರ ಭಿತ್ತಿಪತ್ರವನ್ನು ರಾಷ್ಟ್ರೋತ್ಥಾನ ಪರಿಷತ್ನ ಅಧ್ಯಕ್ಷರಾದ ಶ್ರೀ ಎಂ. ಪಿ. ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಾ. ದಿನೇಶ್ ಹೆಗ್ಡೆ ಹಾಗೂ ಖಜಾಂಜಿ ಶ್ರೀ ಕೆ ಎಸ್ ನಾರಾಯಣ್ ಇಲ್ಲಿನ ಕೇಶವಶಿಲ್ಪದಲ್ಲಿ ಬಿಡುಗಡೆ ಮಾಡಿದರು.
ಕನ್ನಡ ಪುಸ್ತಕ ಹಬ್ಬವು ಅಕ್ಟೋಬರ್ 31 ರಿಂದ ಆರಂಭಗೊಂಡು ಡಿಸೆಂಬರ್ 6 ರವರೆಗೆ ಒಟ್ಟು 37 ದಿನಗಳ ಕಾಲ ಬೆಂಗಳೂರಿನ ಕೆಂಪೇಗೌಡ ನಗರದ ರಾಷ್ಟ್ರೋತ್ಥಾನ ಪರಿಷತ್ನ ಕೇಶವಶಿಲ್ಪ ಸಭಾಂಗಣದಲ್ಲಿ ನಡೆಯಲಿದೆ.
37 ದಿನಗಳ ಸಾಹಿತ್ಯ-ಸಂಸ್ಕೃತಿ ಉತ್ಸವದಲ್ಲಿ, ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಇರಲಿದ್ದು, ಪುಸ್ತಕ ಪ್ರೇಮಿಗಳು ಶೇ 10 ರಿಂದ ಶೇ 60ರ ವರೆಗೂ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿ ಮಾಡಬಹುದು. ಈ ಬಾರಿಯ ಪುಸ್ತಕ ಹಬ್ಬದಲ್ಲಿ ಹೊಸ ಪುಸ್ತಕಗಳ ಲೋಕಾರ್ಪಣೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು, ಸಾಹಿತ್ಯ-ಸಂಸ್ಕೃತಿ ಸಂಬಂಧಿತ ಚರ್ಚೆ, ಸಂವಾದ, ಉಪನ್ಯಾಸಗಳನ್ನೂ ಆಯೋಜಿಸಲಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 95911 55622















